ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸವನ್ನು ಮೊದಲು ಮಾಡಿ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಿರಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.
ಯಾವುದೇ ವಿಷಯಗಳ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾವೆಲ್ಲರೂ ಇದ್ದೇವೆ. ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರು ಇದ್ದೇವೆ. ಯಾವಾಗ ಏನು ಮಾಡಬೇಕು ಎಂಬುದನ್ನು ನಾವು ತೀರ್ಮಾನಿಸುತ್ತೇವೆ. ಹೈಕಂಡ್ ಗೆ ಒಂದು ಗುರಿ ಇರುತ್ತದೆ. ಹೈಕಾಂಡ್ ತೀರ್ಮಾನವೇ ಅಂತಿಮ. ಇಲ್ಲಿ ನೂರು ಜನ ನೂರು ಮತನಾಡಿದ ಮಾತ್ರಕ್ಕೆ ಅದಕ್ಕೆಲ್ಲ ಉತ್ತರಿಸಲು ಆಗಲ್ಲ ಎಂದು ಹೇಳಿದರು.
Post a Comment