ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಹಸನ್ ಚಿಸ್ತಿ ಅವರ ವಾರ್ಷಿಕ ಉರ್ಸ್ ಅಜ್ಮೀರ್‌ನಲ್ಲಿ ಆರಂಭ
ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಹಸನ್ ಚಿಶ್ತಿಯ ವಾರ್ಷಿಕ ಉರ್ಸ್ ಅಜ್ಮೀರ್‌ನಲ್ಲಿ ಔಪಚಾರಿಕವಾಗಿ ಪ್ರಾರಂಭವಾಗಿದೆ. 813ನೇ ಉರ್ಸ್ ನಲ್ಲಿ ಪಾಲ್ಗೊಳ್ಳಲು ದೇಶ ವಿದೇಶಗಳಿಂದ ಯಾತ್ರಾರ್ಥಿಗಳು ಆಗಮಿಸುತ್ತಿದ್ದಾರೆ. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಇಂದು ಮಜರ್ ಷರೀಫ್ ನಲ್ಲಿ ಚಾದರ್ ಅರ್ಪಿಸಿದರು. ಪ್ರಧಾನಿ ನರೇಂದ್ರ ಮೋದಿ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಚಾದರ್ ಅರ್ಪಿಸಲಿದ್ದಾರೆ.
ಶ್ರೀ ರಿಜಿಜು ಅವರು ಅದೇ ದಿನ ದರ್ಗಾದ ವೆಬ್ ಪೋರ್ಟಲ್ ಮತ್ತು ಗರೀಬ್ ನವಾಜ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡುತ್ತಾರೆ. ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆಯನ್ನೂ ಮಾಡಲಾಗಿದೆ.
Post a Comment