ಸಾವಯವ ಕೃಷಿಯಿಂದ ರೈತರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ
ಸಾವಯವ ಕೃಷಿಯು ಉತ್ತಮ ಆದಾಯ ಮತ್ತು ಉದ್ಯೋಗವನ್ನು ಸೃಷ್ಟಿಸಲು ಪ್ರಬಲ ಮಾಧ್ಯಮವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಸಾವಯವ ಉತ್ಪಾದನೆಯ ರಾಷ್ಟ್ರೀಯ ಕಾರ್ಯಕ್ರಮದ 8 ನೇ ಆವೃತ್ತಿಗೆ ಚಾಲನೆ ನೀಡಿದ ಶ್ರೀ ಗೋಯಲ್, ಸಾವಯವ ಕೃಷಿಯಿಂದ ರೈತರ ಆದಾಯ ಹೆಚ್ಚಾಗಿದೆ ಎಂದು ಹೇಳಿದರು. ಪ್ರಸ್ತುತ, ಸಾವಯವ ಉತ್ಪನ್ನಗಳ ರಫ್ತು ಆರು ಸಾವಿರ ಕೋಟಿ ರೂಪಾಯಿಗಳಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ ಇದು 20 ಸಾವಿರ ಕೋಟಿ ರೂಪಾಯಿಗಳಿಗೆ ಏರುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು.
Post a Comment