ಟೆಹ್ರಾನ್‌ನ ಎಸ್‌ಸಿ ಕಟ್ಟಡದಲ್ಲಿ ಇಬ್ಬರು ನ್ಯಾಯಾಧೀಶರ ಮೇಲೆ ಗುಂಡಿನ ದಾಳಿ

ಟೆಹ್ರಾನ್‌ನ ಎಸ್‌ಸಿ ಕಟ್ಟಡದಲ್ಲಿ ಇಬ್ಬರು ನ್ಯಾಯಾಧೀಶರ ಮೇಲೆ ಗುಂಡಿನ ದಾಳಿ

 

ಇರಾನ್‌ನಲ್ಲಿ, ಟೆಹ್ರಾನ್‌ನ ಸುಪ್ರೀಂ ಕೋರ್ಟ್ ಕಟ್ಟಡದಲ್ಲಿ ಇಂದು ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ನ್ಯಾಯಾಧೀಶರು ಸಾವನ್ನಪ್ಪಿದ್ದಾರೆ. ಮೂವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ಗುರಿಯಾಗಿಸಲಾಗಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ನ್ಯಾಯಾಧೀಶರು ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ದಾಳಿಕೋರನು ಗುಂಡಿನ ದಾಳಿ ನಡೆಸಿದ ತಕ್ಷಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾಳಿಯ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ದಾಳಿಕೋರನಿಗೆ ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಪ್ರಕರಣ ಬಾಕಿ ಉಳಿದಿಲ್ಲ ಮತ್ತು ಇಬ್ಬರು ನ್ಯಾಯಾಧೀಶರ ನೇತೃತ್ವದ ಶಾಖೆಗಳ ಕಕ್ಷಿದಾರನಲ್ಲ ಎಂದು ಪ್ರಾಥಮಿಕ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

Post a Comment

Previous Post Next Post