ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಹಾಸ್ಯಗಳ ಪ್ರಸರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಕಾನೂನಿನಡಿ ನಿಷೇಧಿಸಲ್ಪಟ್ಟ ಕಂಟೆಂಟ್‌ಗಳನ್ನು ಪ್ರಸಾರ ಮಾಡುವುದರ ವಿರುದ್ಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಎಚ್ಚರಿಕೆ ನೀಡಿದೆ.
ಯಾವುದೇ ಕಂಟೆಂಟ್ ಅನ್ನು ಪ್ರಸಾರ ಮಾಡುವಾಗ ವಯಸ್ಸಿನ ಆಧಾರದ ಮೇಲೆ ವರ್ಗೀಕರಣ ಸೇರಿದಂತೆ ಐಟಿ ನಿಯಮಗಳು 2021ರ ಅಡಿಯಲ್ಲಿ ಸೂಚಿಸಲಾದ ನೀತಿ ಸಂಹಿತೆಗೆ ಕಟ್ಟುನಿಟ್ಟಾಗಿ ಬದ್ಧವಾಗಿರಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಓವರ್ ದಿ ಟಾಪ್ (ಒಟಿಟಿ) ಪ್ಲಾಟ್‌ಫಾರ್ಮ್‌ಗಳು ಮತ್ತು ಸ್ವಯಂ ನಿಯಂತ್ರಕ ಸಂಸ್ಥೆಗಳಿಗೆ ಮಾರ್ಗಸೂಚಿಯಲ್ಲಿ ತಿಳಿಸಿದೆ.
Post a Comment