ಛತ್ತೀಸ್‌ಗಢ: ಬಿಜಾಪುರ ಮತ್ತು ಕಾಂಕೇರ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳಿಂದ 30 ಮಾವೋವಾದಿಗಳು ಹತ್ಯೆ

ಛತ್ತೀಸ್‌ಗಢದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು ಮೂವತ್ತು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಈ ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮಾವೋವಾದಿಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಜವಾನ್ ಕೂಡ ಹುತಾತ್ಮರಾಗಿದ್ದಾರೆ.
ಮೊದಲ ಎನ್ಕೌಂಟರ್ ಬಿಜಾಪುರ ಜಿಲ್ಲೆಯಲ್ಲಿ ನಡೆಯಿತು. ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿರುವ ಕಾಡಿನಲ್ಲಿ ಹೆಚ್ಚಿನ ಸಂಖ್ಯೆಯ ಮಾವೋವಾದಿಗಳು ಇದ್ದಾರೆ ಎಂಬ ಗುಪ್ತಚರ ಮಾಹಿತಿ ಭದ್ರತಾ ಪಡೆಗಳಿಗೆ ಬಂದಿತ್ತು. ಇದರ ನಂತರ, ವಿವಿಧ ಜಿಲ್ಲೆಗಳಿಂದ ಭದ್ರತಾ ಪಡೆಗಳ ತಂಡಗಳನ್ನು ಈ ಪ್ರದೇಶಕ್ಕೆ ಕಳುಹಿಸಲಾಯಿತು. ಜಿಲ್ಲೆಯ ಗಂಗಲೂರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಎನ್ಕೌಂಟರ್ ಪ್ರಾರಂಭವಾಯಿತು. ಎರಡೂ ಕಡೆಯಿಂದ ನಿರಂತರ ಗುಂಡಿನ ದಾಳಿ ಮುಂದುವರೆಯಿತು. ಎನ್ಕೌಂಟರ್ ನಂತರ, ಭದ್ರತಾ ಪಡೆಗಳು ಸ್ಥಳದಿಂದ ಇಪ್ಪತ್ತಾರು ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಂಡವು. ಇದಲ್ಲದೆ, ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಎನ್ಕೌಂಟರ್ನಲ್ಲಿ ಜಿಲ್ಲಾ ಮೀಸಲು ಪಡೆ-ಡಿಆರ್ಜಿಯ ಒಬ್ಬ ಜವಾನ್ ಹುತಾತ್ಮರಾದರು.
ಕಂಕೇರ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಮಾವೋವಾದಿಗಳ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.
ಈ ಎನ್‌ಕೌಂಟರ್‌ಗಳಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ-ಸಿಆರ್‌ಪಿಎಫ್, ವಿಶೇಷ ಕಾರ್ಯಪಡೆ-ಎಸ್‌ಟಿಎಫ್ ಮತ್ತು ಜಿಲ್ಲಾ ಮೀಸಲು ಪಡೆ-ಡಿಆರ್‌ಜಿಯ ಯೋಧರು ಭಾಗಿಯಾಗಿದ್ದರು.
Post a Comment