ಜನಸಂಖ್ಯೆ ಆಧಾರಿತ ಲೋಕಸಭಾ ಪುನರ್ವಿಂಗಡಣೆಗೆ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ವಿರೋಧ

ಜನಸಂಖ್ಯೆ ಆಧಾರಿತ ಲೋಕಸಭಾ ಪುನರ್ವಿಂಗಡಣೆಗೆ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ವಿರೋಧ

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಗೆ ಜನಸಂಖ್ಯೆಯನ್ನು ಏಕೈಕ ಮಾನದಂಡವಾಗಿ ಬಳಸುವುದರ ವಿರುದ್ಧ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಎಚ್ಚರಿಕೆ ನೀಡಿದ್ದಾರೆ. ಇದು ತಮ್ಮ ಜನಸಂಖ್ಯಾ ಬೆಳವಣಿಗೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ಅನ್ಯಾಯವಾಗಿ ಶಿಕ್ಷೆಯಾಗುತ್ತದೆ ಎಂದು ಅವರು ಹೇಳಿದರು. ಪುನರ್ವಿಂಗಡಣೆ ಪ್ರಕ್ರಿಯೆಯ ಬಗ್ಗೆ ಇರುವ ಕಳವಳಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಸರ್ವಪಕ್ಷ ಚರ್ಚೆಯನ್ನು ನಡೆಸಬೇಕೆಂದು ಬಿಜೆಡಿ ಅಧ್ಯಕ್ಷರು ಪ್ರತಿಪಾದಿಸಿದರು.

 

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ಚೆನ್ನೈನಲ್ಲಿ ಕರೆದಿದ್ದ ಕ್ಷೇತ್ರ ಪುನರ್ವಿಂಗಡಣೆ ಕುರಿತ ಮೊದಲ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಸಭೆಯನ್ನುದ್ದೇಶಿಸಿ ಮಾತನಾಡಿದ ಪಟ್ನಾಯಕ್, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಜೊತೆಗೆ ಒಡಿಶಾ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಎಂದು ಗಮನಸೆಳೆದರು. 2026 ರ ಅಂದಾಜು ಜನಸಂಖ್ಯಾ ಅಂಕಿಅಂಶಗಳು ಕ್ಷೇತ್ರ ಪುನರ್ವಿಂಗಡಣೆಗೆ ಆಧಾರವಾದರೆ, ಒಡಿಶಾ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಎರಡರಲ್ಲೂ ಸ್ಥಾನಗಳನ್ನು ಕಳೆದುಕೊಳ್ಳಬಹುದು ಎಂದು ಬಿಜೆಡಿ ನಾಯಕ ಎಚ್ಚರಿಸಿದ್ದಾರೆ.

Post a Comment

Previous Post Next Post