ಹೊಸ ಆದಾಯ ತೆರಿಗೆ ಮಸೂದೆ - 2025 ರ ಕುರಿತಾದ ಲೋಕಸಭೆಯ ಆಯ್ಕೆ ಸಮಿತಿಯು ನವದೆಹಲಿಯ ಸಂಸತ್ ಭವನದಲ್ಲಿ ಸಭೆ ನಡೆಸುತ್ತಿದೆ. 31 ಸದಸ್ಯರ ಸಮಿತಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವ ವಹಿಸಿದ್ದಾರೆ. ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನದಂದು ಸಮಿತಿ ತನ್ನ ವರದಿಯನ್ನು ಸಲ್ಲಿಸಲಿದೆ.
ಆದಾಯ ತೆರಿಗೆ ಮಸೂದೆ 2025 ಆದಾಯ ತೆರಿಗೆಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸುವ ಮತ್ತು ತಿದ್ದುಪಡಿ ಮಾಡುವ ಗುರಿಯನ್ನು ಹೊಂದಿದೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಇದನ್ನು ಲೋಕಸಭೆಯಲ್ಲಿ ಪರಿಚಯಿಸಲಾಯಿತು. ನಂತರ ಕರಡು ಕಾನೂನನ್ನು ಸದನದ ಆಯ್ಕೆ ಸಮಿತಿಗೆ ಉಲ್ಲೇಖಿಸಲಾಯಿತು.
Post a Comment