ಈ ರೀತಿಯ ನ್ಯಾಯಾಂಗದ ಹಸ್ತಕ್ಷೇಪದಿಂದ ಭಯೋತ್ಪಾದನೆ ವಿರುದ್ಧ ಹೋರಾಡುವ ಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಯಾವ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಖುದ್ದಾಗಿ ಹೋಗಿ ನೋಡಬೇಕು. ಭಯೋತ್ಪಾದನೆಯ ನೆಲದ ಮೇಲೆ ಯಾವ ಪರಿಣಾಮ ಬೀರುತ್ತಿದೆ ಎಂಬುದನ್ನೂ ನೋಡಬೇಕು ಎಂದು ಭಾರತೀಯ ಸೇನ್ಯದ ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿ.ಪಿ. ಪಾಂಡೆ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಸಲಹೆ ನೀಡಿದ್ದಾರೆ. ಅವರು ಎಎನ್‌ಐ ಸುದ್ದಿ ಸಂಸ್ಥೆಯ ಪಾಡ್‌ಕಾಸ್ಟ್‌ನಲ್ಲಿ ಮಾತನಾಡುತ್ತಿದ್ದರು.
Post a Comment