ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರೊಂದಿಗೆ ತಂತ್ರಜ್ಞಾನ, ನಾವೀನ್ಯತೆ ಸಹಯೋಗದ ಕುರಿತು ಪ್ರಧಾನಿ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಇಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರೊಂದಿಗೆ ಮಾತನಾಡಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಕುರಿತು ಚರ್ಚಿಸಿದರು. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಭೆಯಲ್ಲಿ ಶ್ರೀ ಮಸ್ಕ್ ಅವರೊಂದಿಗೆ ಮಾತನಾಡಿದ ವಿಷಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದ್ದೇನೆ ಎಂದು ಮೋದಿ ಮಾಹಿತಿ ನೀಡಿದರು. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ಪಾಲುದಾರಿಕೆಯನ್ನು ಮುಂದುವರಿಸುವ ಭಾರತದ ಬದ್ಧತೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.
Post a Comment