ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ, ಸ್ವಯಂ ಪ್ರೇರಿತ ಕ್ರಮದ ಎಚ್ಚರಿಕೆ

ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿತು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರ ಪೀಠವು ರಾಹುಲ್ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದನ್ನು ತಡೆಯುವಂತೆ ಕೇಳಿತು.
ನವೆಂಬರ್ 2022 ರಲ್ಲಿ, ಶ್ರೀ ಗಾಂಧಿಯವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ರ್ಯಾಲಿಯಲ್ಲಿ ಸಾವರ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರು. ನ್ಯಾಯಮೂರ್ತಿ ದತ್ತ ನೇತೃತ್ವದ ಪೀಠವು, ಕಾಂಗ್ರೆಸ್ ನಾಯಕರು ಭವಿಷ್ಯದಲ್ಲಿ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿದರೆ, ಅವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿತು.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಶಹನವಾಜ್ ಹುಸೇನ್, ವೀರ್ ಸಾವರ್ಕರ್ ಅವರನ್ನು ಪದೇ ಪದೇ ಅವಮಾನಿಸುವುದನ್ನು ಮುಂದುವರಿಸಿದರೆ ಗಾಂಧಿ ಅವರನ್ನು ಕ್ಷಮಿಸಲಾಗುವುದಿಲ್ಲ ಎಂದು ಹೇಳಿದರು.
Post a Comment