ಯುಗಾದಿ ಬಳಿಕ ಕೋಡಿಶ್ರೀ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮಾತನಾಡಿದ್ದಾರೆ.

ಈ ಪೈಕಿ ಇದೇ ನಾಯಕನಿಗೆ ಮುಖ್ಯಮಂತ್ರಿ ಪಟ್ಟ ಎಂದು ಕೋಡಿಶ್ರೀ ಹೇಳಿದ್ದಾರೆ. ವಿಜಯಪುರ‌ ಜಿಲ್ಲೆಯ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಕಳೆದ ತಿಂಗಳಷ್ಟೇ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರ ರಾಜ್ಯ ರಾಜಕಾರಣದ ಸಂಬಂಧ ಸ್ಫೋಟಕ ಭವಿಷ್ಯ ನುಡಿದಿದ್ದರು. ರಾಜ್ಯ ಸರ್ಕಾರಕ್ಕೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದರು. ಮತ್ತೊಂದು ಭವಿಷ್ಯ ನುಡಿದಿದ್ದ ಕೋಡಿಶ್ರೀ ಅವರು ಹಾಲು ಕೆಟ್ಟರೂ, ಹಾಲಮತ ಸಮಾಜ ಕೆಡುವುದಿಲ್ಲ ಎಂಬ ಮಾತಿದೆ. ಅದರಂತೆ ಈಗ ಹಾಲಮತ ಸಮಾಜದವರ ಕೈಯಲ್ಲೇ ರಾಜ್ಯದ ಚುಕ್ಕಾಣಿ ಇದೆ. ಹಾಗಾಗಿ ಅಧಿಕಾರವನ್ನು ಅವರಿಂದ ಬಿಡಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ, ಅವರಾಗಿಯೇ ಅಧಿಕಾರ ಬಿಡಬೇಕು ಎಂದು ಸಿದ್ದರಾಮಯ್ಯ ಅವರ ಕುರಿತು ಪರೋಕ್ಷವಾಗಿ ಹೇಳಿದ್ದರು.

ಹಾಲುಮತದವರಿಂದ ಅಧಿಕಾರ ಪಡೆದುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಮುಂದೆ ಏನೆಲ್ಲ ಆಗುತ್ತೆ? ಎಂದು ಯುಗಾದಿ ಬಳಿಕ ಭವಿಷ್ಯ ಹೇಳುತ್ತೇನೆ ಎಂದಿದ್ದರು. ಕೋಡಿಶ್ರೀ ಭವಿಷ್ಯವಾಣಿ ಪ್ರಕಾರ ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭವಾದ ಮಾತಲ್ಲ. ಒಂದು ವೇಳೆ ಸಿದ್ದರಾಮಯ್ಯ ಅವರೇ ಅಧಿಕಾರವನ್ನ ಬಿಡಬೇಕು. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಸಾಧ್ಯವೇ ಇಲ್ಲ ಎಂದು ಸುಳಿವು ನೀಡಿದ್ದರು. ಯುಗಾದಿ ಬಳಿಕ ಕೋಡಿಶ್ರೀ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮಾತನಾಡಿದ್ದಾರೆ.

ಉತ್ತರ ಕರ್ನಾಟಕದ ನಾಯಕನಿಗೆ ಸಿಎಂ ಸ್ಥಾನ

ಇದೀಗ ವೇದಿಕೆಯಲ್ಲೇ ಮುಂದಿನ ಸಿಎಂ ಯಾರು ಎಂದು ಕೋಡಿಶ್ರೀ ಅವರು ಹೆಸರು ಸಹ ಹೇಳಿದ್ದಾರೆ. ಇತ್ತೀಚೆಗೆ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದೆ. ಈ ವೇಳೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರಸ್ತಾಪವಾಯಿತು. ಈ ವೇಳೆ ಉತ್ತರ ಕರ್ನಾಟಕದಿಂದ ಯಾರಿಗೆ ಮುಖ್ಯಮಂತ್ರಿ ಸ್ಥಾನ ಎಂದು ಕೇಳಿದಾಗ ಸಚಿವ ಎಂ.ಬಿ.ಪಾಟೀಲ್‌ ಅವರ ಹೆಸರು ಬಂತು. ಎಂಬಿ ಪಾಟೀಲ್‌ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಕೋಡಿಶ್ರೀಗಳು ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಲಿ ಎಂದು ಕೋಡಿಮಠದ ಶ್ರೀಗಳು ಹೇಳಿಕೆ ನೀಡಿದ್ದಾರೆ. ಅಲ್ಲದೆ ಎಂಬಿ ಪಾಟೀಲ್‌ ಅವರ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಉತ್ತರ ಕರ್ನಾಟಕ ಭಾಗದ ನಾಯಕರ ಪೈಕಿ ಎಂಬಿ ಪಾಟೀಲ್‌ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಕೋಡಿಶ್ರೀಗಳು ಹೇಳಿದ್ದಾರೆ. ಮುಂದೆ ರಾಜ್ಯದಲ್ಲಿ ಪ್ರಾಕೃತಿಕ ವಿಕೋಪಗಳ ಬಗ್ಗೆಯೂ ಸ್ವಾಮೀಜಿ ಮುನ್ಸೂಚನೆ ನೀಡಿದ್ದು, ಈ ವರ್ಷ ಕರ್ನಾಟಕದಲ್ಲಿ ಮಳೆ ಬೆಳೆ ತುಂಬಾ ಚೆನ್ನಾಗಿದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಜನರು ದೇವರು ಹಾಗೂ ಧರ್ಮದ ಮೊರೆ ಹೋಗಬೇಕು ಎಂದು ಕೋಡಿಶ್ರೀ ಹೇಳಿದ್ದಾರೆ. ಕೋಡಿಶ್ರೀ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ

Post a Comment

Previous Post Next Post