ಲ್ಕತಾ; ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ಮಸೂದೆಯನ್ನು ವಿರೋಧಿಸಿ ನಡೆದ ಹಿಂಸಾಚಾರದಲ್ಲಿ( Waqf Violence) ಕನಿಷ್ಠ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಗದ್ದಲ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ರಾಜ್ಯದ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ಮತ್ತು ಅಸುರಕ್ಷಿತವಾಗಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಇಲ್ಲಿನ ಹಿಂದೂಗಳು ತಮ್ಮ ಮನೆಗಳಲ್ಲಿಯೂ ಸುರಕ್ಷಿತವಾಗಿಲ್ಲ. ಹಿಂಸಾಚಾರದ ಸಮಯದಲ್ಲಿ ರಾಜ್ಯಕ್ಕೆ ಕೇಂದ್ರ ಭದ್ರತಾ ಪಡೆಗಳನ್ನು ಕಳುಹಿಸುವಂತೆ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವನ್ನು ವಿನಂತಿಸಿದ್ದಾಗಿ ಹೇಳಿದರು. ಅಲ್ಲದೆ 400ಕ್ಕೂ ಹೆಚ್ಚು ಹಿಂದೂಗಳಿಗೆ ತಮ್ಮ ಮನೆಗಳಿಂದ ಪಲಾಯನ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಹೇಳಿದರು.More than 400 Hindus from Dhulian, Murshidabad driven by fear of religiously driven bigots were forced to flee across the river & take shelter at Par Lalpur High School, Deonapur-Sovapur GP, Baisnabnagar, Malda.

Religious persecution in Bengal is real.

Appeasement politics of… pic.twitter.com/gZFuanOT4N

— Suvendu Adhikari (@SuvenduWB) April 13, 2025ಮಮತಾ ಬ್ಯಾನರ್ಜಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ಒಬ್ಬ ಹಿಂದೂ ತನ್ನ ಹಬ್ಬವನ್ನು ಇಲ್ಲಿ ಆಚರಿಸಲು ಬಯಸಿದರೆ ಮೊದಲು ನ್ಯಾಯಾಲಯಕ್ಕೆ ಹೋಗಬೇಕು ಎಂದು ಹೇಳಿದರು. ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಇಲ್ಲಿ ಸಾಕಷ್ಟು ಹಿಂಸಾಚಾರ ನಡೆದಿದೆ. ಗುಂಪು ದಾಳಿಯಲ್ಲಿ ನಿನ್ನೆ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಪೊಲೀಸ್ ಗೋಲಿಬಾರ್‌ನಲ್ಲಿ ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ. ಧುಲಿಯನ್‌ನಲ್ಲಿ ಹಿಂದೂ ಅಂಗಡಿಗಳನ್ನು ಲೂಟಿ ಮಾಡಲಾಗಿದೆ. ಪರಿಸ್ಥಿತಿ ಎಷ್ಟು ಭೀಕರವಾಗಿದೆ ಎಂದರೆ ಪೊಲೀಸರ ಕೈಮೀರಿದೆ. ಇಲ್ಲಿಯವರೆಗೆ 35 ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ ಆದರೆ ಮಮತಾ ಬ್ಯಾನರ್ಜಿ ತುಷ್ಟೀಕರಣದ ರಾಜಕೀಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದರು.

ಅದಕ್ಕಾಗಿಯೇ ನಾನು, ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ. ಈ ವಿಷಯದ ಬಗ್ಗೆ ರಾಜಭವನಕ್ಕೆ ಪತ್ರ ಬರೆದಿದ್ದೇನೆ ಮತ್ತು ಕೇಂದ್ರ ಭದ್ರತಾ ಪಡೆಗೆ ಬೇಡಿಕೆ ಇಟ್ಟಿದ್ದೇನೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಹೇಳಿದರು. ನಾನು ಬಹಳ ದಿನಗಳಿಂದ ಇದನ್ನು ಬೇಡುತ್ತಿದ್ದೇನೆ ಆದರೆ ಯಾರೂ ಇದರ ಬಗ್ಗೆ ಗಮನ ಹರಿಸಲಿಲ್ಲ. ಇದಕ್ಕಾಗಿಯೇ ನಾನು ನ್ಯಾಯಾಲಯದ ಮೊರೆ ಹೋಗಿದ್ದೆ. ಬಂಗಾಳದಲ್ಲಿ ಹಿಂದೂಗಳು ತಮ್ಮ ಮನೆಗಳಲ್ಲಿಯೂ ಸುರಕ್ಷಿತವಾಗಿಲ್ಲ ಎಂಬುದು ವಾಸ್ತವ ಎಂದು ತಿಳಿಸಿದರು.

ಮತ್ತೊಂದೆಡೆ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ವಿವರಿಸುತ್ತಾ, ವಕ್ಫ್ ಕಾಯ್ದೆಗೆ ಸಂಬಂಧಿಸಿದ ನಿಬಂಧನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇನ್ನು ಪ್ರತಿಭಟನೆಗೆ ಸಂಬಂಧಿಸಿದಂತ ಈವರೆಗೂ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಸುಟಿ, ಧುಲಿಯನ್, ಸಂಸರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ಶಾಂತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್)

ಎನ್ಐಎ ಕಸ್ಟಡಿಯಲ್ಲಿರುವ ತಹವ್ವೂರ್ ರಾಣಾ; ಅಧಿಕಾರಿಗಳ ಬಳಿ ಇಟ್ಟ ಬೇಡಿಕೆ ಏನು ಗೊತ್ತಾ? | Tahawwur Rana

Post a Comment

Previous Post Next Post